ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆ ಉದ್ಘಾಟಿಸಿದ ಮೋದಿ

ಕಾಶ್ಮೀರ: 272 ಕಿಮೀ ಉದ್ದದ ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರಕ್ಕೆ ಅರ್ಪಿಸಿದರು.

ಇದರ ಜೊತೆಗೆ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾದಿಂದ ಶ್ರೀನಗರಕ್ಕೆ ಮತ್ತು ಶ್ರೀನರದಿಂದ ಕತ್ರಾಗೆ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸಿದರು.

ನದಿಯಿಂದ 359 ಮೀಟರ್ ಎತ್ತರದಲ್ಲಿರುವ ವಾಸ್ತುಶಿಲ್ಪದ ಅದ್ಭುತ ಚೆನಾಬ್ ರೈಲು ಸೇತುವೆಯು ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾಗಿದೆ.

ಇದು ಭೂಕಂಪ ಮತ್ತು ಪ್ರಬಲ ಗಾಳಿಯ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ. ಇದು ಜಮ್ಮು-ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ.

ಸೇತುವೆಯ ಮೇಲೆ ಚಲಿಸುವ ವಂದೇ ಭಾರತ್ ರೈಲು ಮೂಲಕ, ಕತ್ರಾ ಮತ್ತು ಶ್ರೀನಗರ ನಡುವೆ ಪ್ರಯಾಣಿಸಲು ಕೇವಲ 3 ಗಂಟೆಗಳು ಬೇಕಾಗುತ್ತದೆ, ಇದು ಈಗಿನ ಪ್ರಯಾಣದ ಸಮಯವನ್ನು 2-3 ಗಂಟೆಗಳಷ್ಟು ಕಡಿಮೆ ಮಾಡುತ್ತದೆ.