ಮೈಸೂರು: 50-60 ವರ್ಷ ದೇಶದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರ ಮಾಡಲಾಗದ ಕೆಲಸಗಳನ್ನು ಕೇವಲ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಸಿಎಂ ಗೆ ಟಾಂಗ್ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೋದಿ ಅವರೇ ಸಾಟಿ, ಅವರಿಗೆ ಬೇರೆ ಯಾರ ಹೋಲಿಕೆಯೂ ಸಲ್ಲದು ಎಂದು ತಿಳಿಸಿದರು.
ನಿನ್ನೆಯಷ್ಟೇ ಸಿಎಂ ಸಿದ್ದರಾನಯ್ಯ ಅವರು ಮೋದಿ ಅವರ11 ವರ್ಷದ ಆಡಳಿತಕ್ಕೆ ಜೀರೊ ಮಾರ್ಕ್ಸ್ ಕೊಡುತ್ತೇನೆ ಎಂದು ಹೇಳಿದ್ದರು.
ಕಾಂಗ್ರೆಸ್ಸೇತರ ಸರ್ಕಾರಗಳಲ್ಲಿ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದ ಹೆಗ್ಗಳಿಕೆ ನರೇಂದ್ರಮೋದಿ ಅವರಿಗೆ ಸಲ್ಲುತ್ತದೆ ಎಂದು ಶ್ರೀವತ್ಸ ತಿಳಿಸಿದರು.
ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರ ಅಭಿವೃದ್ದಿಗೆ ಹೆಚ್ಚು ಆದ್ಯತೆ ಕೊಟ್ಟಿದೆ. ಭೀಮ ಸಖಿ ಯೋಜನೆ ಮೂಲಕ ಮಹಿಳೆಯರಿಗೆ ಎಐಸಿ ಇನ್ಶುರೆನ್ಸ್ ವ್ಯವಸ್ಥೆ ಜಾರಿಗೆ ತಂದಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ದೇಶದ ಆಡಳಿತ ನಡೆಸುತ್ತಿದೆ ಎಂದು ಶ್ರೀವತ್ಸ ಶ್ಲಾಘಿಸಿದರು.