(ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ)
ಚಾಮರಾಜನಗರ: ಮಾದಕ ವಸ್ತುಗಳ ಬಳಕೆ, ಸಾಗಾಣಿಕೆ ವಿರೋಧಿ ಜಾಗೃತಿ ದಿನಾಚರಣೆಯ ಸಂಬಂಧ ಚಾ ನಗರ ಜಿಲ್ಲಾ ಪೊಲೀಸ್ ವತಿಯಿಂದ ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸಲು ಜಾಗೃತಿ ಜಾಥ ನಡೆಸಲಾಯಿತು.
ಪಟ್ಟಣದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಪ್ರಮುಖ ಬೀದಿಗಳಲ್ಲಿ ನಡೆಸಿದ ಚಾಮರಾಜನಗರ ಜಿಲ್ಲಾ ಪೊಲೀಸರ ಜಾಗೃತಿ ಜಾಥಾದಲ್ಲಿ
ವಿವಿದ ಕಾಲೇಜಿನ ಮಕ್ಕಳು ಹಾಗೂ ಆಟೋ ಚಾಲಕರು ಬಾಗವಹಿಸಿದ್ದರು.
ಜಾಥಾ ವೇಳೆ ಎಎಸ್ಪಿ,ಡಿವೈಸ್ಪಿ ಪಟ್ಟಣ ಠಾಣಾ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಮಧ್ಯಾಹ್ನ ಎಡಬೆಟ್ಟದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಮಾದಕ ವಸ್ತುಗಳ ಜಾಗೃತಿ ವೇದಿಕೆ ಕಾರ್ಯಕ್ರಮ ಮತ್ತು ಮಾದಕ ವಸ್ತುಗಳ ಬಗ್ಗೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.