ಕೆಂಪೇಗೌಡರು ದಕ್ಷ,ದೂರದೃಷ್ಟಿಯಿದ್ದ ಆಡಳಿತಗಾರರು- ಸಿದ್ದರಾಮಯ್ಯ

ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ, ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸಿಎಂ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದ್ದೇವೆ ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದು ತಿಳಿಸಿದರು.

ಕೆಂಪೇಗೌಡರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ನಿರ್ಮಿಸಿದ್ದರು ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

ಹುಲಿಗಳ ಸಾವು: ತನಿಖಾ ವರದಿಯ ನಂತರ ಕ್ರಮ
ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ‌ ವೇಳೆ ಸಿದ್ದರಾಮಯ್ಯ ತಿಳಿಸಿದರು.

.