ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ,ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು.
ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಹಾಸನ ಮಹಾನಗರ ಪಾಲಿಕೆಗೆ ಇನ್ನೂ ಮೂರು ವರ್ಷ ಯಾವುದೇ ಅನುದಾನ ಅಥವಾ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಈ ಕುರಿತು ಪರಿಶೀಲಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

