ಮಾಸ್ಕ್ ಮ್ಯಾನ್ 10 ದಿನ ಪೊಲೀಸ್ ಕಸ್ಟಡಿಗೆ

ಮಂಗಳೂರು: ಧರ್ಮಸ್ಥಳ ಅಸ್ಥಿಪಂಜರ ಪ್ರಕರಣದಲ್ಲಿ ಮುಸುಕುಧಾರಿಯಾಗಿ ಬಂದಿದ್ದ ಸಾಕ್ಷಿಧಾರ ಚೆನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯ 10 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.

ಸತತ ವಿಚಾರಣೆ ನಡೆಸಿದ್ದ ಎಸ್‌ಐಟಿ ಪೊಲೀಸರು ಇಂದು ಬೆಳಗ್ಗೆ ಚಿನ್ನಯ್ಯನನ್ನು ಬಂಧಿಸಿದ್ದರು.

ಬಂಧನ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಸಿದ ಷಡ್ಯಂತ್ರದಲ್ಲಿ ಈತ ಭಾಗಿಯಾಗಿರುವ ಕಾರಣ ಎಸ್‌ಐಟಿ ಪೊಲೀಸರು ವಶಕ್ಕೆ ಕೇಳಿದ್ದರು.

ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.