ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಪ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ.
ಗುರುವಾರ ರಾತ್ರಿ ಗ್ರಾಮದಲ್ಲಿ ಅವಳಡಿಸಿದ್ದ ಅಂಬೇಡ್ಕರ್ ಪ್ಲೆಕ್ಸ್ ಹರಿದು ಹಾಕಿರುವ ಕಿಡಿಗೇಡಿಗಳ ವಿರುದ್ದ ಗ್ರಾಮಸ್ಥರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ಅವರ ಪ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಅವಮಾನಿಸಿದ್ದಲ್ಲದೆ ಗ್ರಾಮದಲ್ಲಿರುವ ಲುಂಬಿನಿ ಬುದ್ಧವಿಹಾರದಲ್ಲಿ ಬುದ್ಧ ಪ್ರತಿಮೆಯನ್ನೂ ಒಡೆದು ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಹಾಗೂ ಪೂರ್ವ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕೃತ್ಯಕ್ಕೆ ಕಾರಣರಾದವರನ್ನು ಪತ್ತೆ ಹಚ್ಚಿ ಶೀಘ್ರವೇ ಬಂಧಿಸಿ ಕ್ರಮ ಕೈಗೊಳ್ಳಲಾಗವುದು ಎಂದು ಎಸ್ಪಿ ಕವಿತಾರವರು ತಿಳಿಸಿದ್ದಾರೆ.

