ಮೈಸೂರು: ರಾಹುಲ್ ಗಾಂಧಿ ಅವರು ಸಮಯ ಕೊಟ್ಟರೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡುತ್ತೇನೆ ಇಲ್ಲದಿದ್ದರೆ ಇಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ರಾಹುಲ್ ಗಾಂಧಿಯವರ ಸಮಯ ಕೇಳಿದ್ದೇನೆ
ಸಮಯ ಕೊಟ್ಟರೆ ಅಲ್ಲೇ ಉಳಿದುಕೊಂಡು ಚರ್ಚೆ ಮಾಡಿ ಬರುತ್ತೇನೆ ಎಂದು ಹೇಳಿದರು.
ರಾಜ್ಯದೆಲ್ಲೆಡೆ ನವೆಂಬರ್ ಕ್ರಾಂತಿ ಸದ್ದು ಮಾಡುತ್ತಿರುವ ಹೊತ್ತಲ್ಲೇ ಸಿದ್ದರಾಮಯ್ಯ ಅವರು ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ.ಆದರೆ ಅವರಿಗೆ ಇನ್ನೂ ಹೈಕಮಾಂಡ್ ಭೇಟಿ ಸಮಯ ಸಿಕ್ಕಿಲ್ಲ.ಇದೀಗ ಇದು ಚರ್ಚೆಗೂ ಗ್ರಾಸ ಒದಗಿಸಿದೆ.
ನವೆಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ,
ಕಪಿಲ್ ಸಿಬಲ್ ಅವರ ಕಾರ್ಯಕ್ರಮ ಇದೆ
ಹಾಗಾಗಿ ದೆಹಲಿಗೆ ಹೋಗುತ್ತಿದ್ದೇನೆ,
ಅವತ್ತೆ ಹೋಗಿ ಅವತ್ತೆ ವಾಪಸ್ ಬರುವ ಪ್ಲ್ಯಾನ್ ಇದೆ. ಆದರೆ ರಾಹುಲ್ ಗಾಂಧಿ ಅವರ ಸಮಯ ಕೇಳಿದ್ದೇನೆ ಅವರು
ಸಮಯ ಕೊಟ್ಟರೆ ಅಲ್ಲೇ ಉಳಿದುಕೊಂಡು ಅವರನ್ನು ಮಾತನಾಡಿಸಿಯೇ ಬರುತ್ತೇನೆ ಇಲ್ಲದಿದ್ದರೆ ವಾಪಸು ಬರುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

