ಚಾಮರಾಜನಗರ: ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಸುವರ್ಣಾವತಿ ಹಿನ್ನೀರಿನಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಅಟ್ಟುಗೂಳಿಪುರ ಗ್ರಾಮದ ನಿವಾಸಿ ಶಿವಸ್ವಾಮಿ (24) ಮೃತ ಯುವಕ. ಗೆಳೆಯ ದಿಲೀಪ್ ಕುಮಾರ್ ಜೊತೆ ಸುವರ್ಣಾವತಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಸೋಮವಾರ ರಾತ್ರಿ ತೆಪ್ಪದಲ್ಲಿ ಶಿವಸ್ವಾಮಿ ತೆರಳಿದ್ದರು.ಈ ಸಂದರ್ಭ ತೆಪ್ಪ ಮಗುಚಿದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ.
ದಿಲೀಪ್ ಕುಮಾರ್ ಈಜಿಕೊಂಡು ದಡ ಸೇರಿದ್ದು, ಶಿವಸ್ವಾಮಿ ಈಜಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆಯೇ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

