ನಗರಸಭೆ ಆರ್ ಐ,ಪಿಡಬ್ಲ್ಯೂಡಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

ಮೈಸೂರು: ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಶಾಕ್ ನೀಡಿದ್ದಾರೆ.

ಹೂಟಗಳ್ಳಿ ನಗರಸಭೆ ಆರ್ ಐ ರಾಮಸ್ವಾಮಿ, ಮಡಿಕೇರಿ ಪಿಡಬ್ಲ್ಯೂಡಿ ಎಂಜಿನಿಯರ್ ಗಿರೀಶ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಲೋಹಿತ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ತಿ.ನರಸೀಪುರದಲ್ಲಿನ ರಾಮಸ್ವಾಮಿ‌ಯವರ
ಮನೆ, ಮೈಸೂರಿನ‌ ವಿಜಯನಗರ ನಾಲ್ಕನೇ ಹಂತದಲ್ಲಿರುವ ಗಿರೀಶ್ ಅವರ ಮನೆ ಮೇಲೆ ದಾಳಿ ಮಾಡಲಾಗಿದ್ದು, ಮನೆಯಲ್ಲಿರುವ ಕಡತಗಳು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.