ಮೈಸೂರು: ಮೈಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ 10 ತಲವಾರ್ ಗಳು,2 kg ಗಾಂಜಾ ಹಾಗೂ 7.30 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.
ಫಿರ್ದೋಶ್ ಹಾಗೂ ರೋಶನ್ ಬಂಧಿತ ಆರೋಪಿಗಳು.
ಖಚಿತ ಮಾಹಿತಿ ಆಧರಿಸಿ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಮನೆಗಳ ಮೇಲೆ ದಾಳಿ ನಡೆಸಿದಾಗ ಆರೋಪಿಗಳು ಮಾಲು ಸಮೇತ ಸಿಕ್ಕಿಬಿದ್ದಿದ್ದಾರೆ.
ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಡಿಸಿಪಿಗಳಾದ ಬಿಂದುಮಣಿ ಹಾಗೂ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ ಮಂಡಿ ಠಾಣಾ ಪೊಲೀಸರು ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಫಿರ್ದೋಶ್ ಹಾಗೂ ರೋಶನ್ ಬಂಧಿತರು. ಆರೋಪಿಗಳಿಗೆ ಇಷ್ಟು ದೊಡ್ಡ ಪ್ರಮಾಣದ ಗಾಂಜಾ ಬಂದಿದ್ದು ಹೇಗೆ ಇದರ ಹಿಂದಿರುವ ದೊಡ್ಡ ವ್ಯಕ್ತಿಗಳು ಯಾರು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಹತ್ತು ತಲ್ವಾರ್ ಗಳು ಸಹ ಸಿಕ್ಕಿದ್ದು ಮಾರಕಾಸ್ತ್ರಗಳನ್ನ ಸಂಗ್ರಹಿಸಿದ್ದ ಉದ್ದೇಶ ಏನು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದೆ.

