ಸರ್ಕಾರಿ ಸ್ಕೂಲ್ ಟೂರ್ ಮಾಡಿ ಬನ್ನಿ ಸ್ವಾಮಿ-ಸಿಎಂ ಗೆ ಅಶೋಕ್ ಟಾಂಗ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನವರೇ,
ಕಾಂಗ್ರೆಸ್ ಪಕ್ಷಕ್ಕೆ ಸೇರಿ ಸುಮಾರು 20 ವರ್ಷಗಳಾದ ಮೇಲೆ ಮೊಟ್ಟಮೊದಲ ಬಾರಿಗೆ ಡಿಸಿಎಂ ಡಿ‌.ಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ, ನಾಟಿಕೋಳಿ ತಿಂಡಿ ತಿಂದು ಹೋಮ್ ಟೂರ್ ಮಾಡಿಕೊಂಡು ಬಂದಿದ್ದೀರಿ.ಮುಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ಎಲ್ಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಛೇಡಿಸಿದ್ದಾರೆ.

ಯಾರ ಜೊತೆ ಅಂತ ನಿಮ್ಮ ಹೈಕಮಾಂಡ್ ಏಜೆಂಟ್ ವೇಣುಗೋಪಾಲ್ ಅವರು ಆದೇಶ ಕೊಡುವುದಕ್ಕೂ ಮುಂಚೆ ಒಮ್ಮೆ ಸರ್ಕಾರಿ ಸ್ಕೂಲ್ ಟೂರ್ ಮಾಡಿ ಬನ್ನಿ ಸ್ವಾಮಿ ಎಂದು ಟ್ವೀಟ್ ಮಾಡಿ‌ ಸಿಎಂ ಕಾಲೆಳೆದಿದ್ದಾರೆ.

ಶೌಚಾಲಯಗಳೇ ಇಲ್ಲದ ಶಾಲೆಗಳು, ಶಿಥಿಲಾವಸ್ಥೆ ಯಲ್ಲಿರುವ ಶಾಲಾ ಕೊಠಡಿಗಳು, ಬಿದ್ದು ಹೋಗುತ್ತಿ ರುವ ಗೋಡೆಗಳು, ಶಿಕ್ಷಕರಿಲ್ಲದ ತರಗತಿಗಳನ್ನು ಒಮ್ಮೆ ಕಣ್ತುಂಬಿಕೊಂಡು ಬನ್ನಿ ಸಿದ್ದರಾಮಯ್ಯನವರೇ.
ಇಂತಹ ಲಜ್ಜೆಗೆಟ್ಟ ಸರ್ಕಾರವನ್ನ ಇಡೀ ಪ್ರಪಂಚದ ಇತಿಹಾಸದಲ್ಲೇ ಕಾಣಲು ಸಾಧ್ಯವಿಲ್ಲ ಎಂದು ಅಶೋಕ್ ಟೀಕಿಸಿದ್ದಾರೆ.