ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ, ಆದರೆ ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು ಯೂನಿಟಿ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ ವಿಚಾರ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಪ್ರಮೋದದೇವಿ ಒಡೆಯರ್, ನ್ಯಾಯಾಲಯದಲ್ಲಿ ಇದೇ ವಿಚಾರವಾಗಿ ಪ್ರಕರಣವಿದೆ,ಮೈಸೂರು ಕಸಬಾ ಹೋಬಳಿಯ ಸ. ನಂ.1 ರಲ್ಲಿರುವ ದೊಡ್ಡಕೆರೆ ಟ್ಯಾಂಕ್ ಬೆಡ್ ಭೂಮಿ. ಇಲ್ಲಿ ನಿರ್ಮಿಸಲು ಉದ್ದೇಶಿಸಲಾದ ಯೂನಿಟಿ ಮಾಲ್ ವಿಚಾರಕ್ಕೆ ಕರ್ನಾಟಕದ ಹೈಕೋರ್ಟ್ ಯಥಾಸ್ಥಿತಿ ಆದೇಶದ ನೀಡಿದೆ ಎಂದು ತಿಳಿಸಿದ್ದಾರೆ
ಈ ವಿಚಾರವಾಗಿ ಕೆಲ ಪತ್ರಿಕೆ ಮತ್ತು ಕೆಲ ಟಿವಿಗಳಲ್ಲಿ ತಪ್ಪು ವರದಿ ಪ್ರಕಟವಾಗಿದೆ. ರಾಜ್ಯದ ಕರಕುಶಲ ವಸ್ತುಗಳು ಮತ್ತು ಜಿಐ ಟ್ಯಾಗ್ ಮಾಡಲಾದ ಉತ್ಪನ್ನಗಳನ್ನು ಪ್ರದರ್ಶಿಸುವುದನ್ನು ನಾನು ವಿರೋಧಿಸುವುದಿಲ್ಲ, ಬಹಿರಂಗ ಮತ್ತು ಅಂತರಂಗ ಜಗಳ ವಿಚಾರ ಸಹ ಇಲ್ಲಿ ಇಲ್ಲ
ಎಂದು ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಸರ್ಕಾರವು ಮಾಲ್ ಸ್ಥಾಪಿಸಲಿ ಅದಕ್ಕೆ ನನ್ನ ವಿರೋಧ ಇಲ್ಲ. ಆದರೆ ಸರ್ಕಾರಕ್ಕೆ ಸೇರಿದ ಯಾವುದೇ ಭೂಮಿಯನ್ನು ಹಂಚಿಕೆ ಮಾಡಲಿ. ಈ ನಿರ್ದಿಷ್ಟ ಖಾಸಗಿ ಆಸ್ತಿಯನ್ನು ಹಂಚಿಕೆ ಮಾಡುವುದು ಸರಿಯಲ್ಲ. ಇದು ಭಾರತ ಸರ್ಕಾರ ಮತ್ತು ಅಂದಿನ ರಾಜ್ಯ ಸರ್ಕಾರದ ನಡುವೆ ರಾಜ್ಯಗಳ ವಿಲೀನದ ಸಮಯದಲ್ಲಿ ನಂತರದ ಒಪ್ಪಂದದ ದಿನಾಂಕ 23-01-1950 ರಂದು ಇತ್ಯರ್ಥವಾಗಿದೆ.
ನನ್ನ ಪೂರ್ವಜರ ಭೂಮಿಯನ್ನು ಉಳಿಸಿಕೊಳ್ಳುವುದು ಮತ್ತು ರಕ್ಷಿಸುವುದು ನನ್ನ ಜವಾಬ್ದಾರಿ. ಅದೇ ಕೆಲಸವನ್ನು ನಾನು ಮಾಡಿದ್ದೇನೆ. ಸರ್ಕಾರದ ಪ್ರತಿಕ್ರಿಯೆ ಮುಂದಿನ ವಿಚಾರಣೆಗಾಗಿ ಕರ್ನಾಟಕದ ಹೈಕೋರ್ಟ್ ಮುಂದೆ ಬರಲಿದೆ ಎಂದು ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.

