ಕರ್ನಾಟಕದಲ್ಲಿ ಬಾಂಗ್ಲಾ ಪ್ರಜೆಗಳ ಉದ್ಧಟತನ:ಕ್ರಮಕ್ಕೆ ಯದುವೀರ್ ಒತ್ತಾಯ

ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಪತ್ರ ಬರೆದಿರುವ ಯದುವೀರ್‌, ಇಂತಹ ವಿಷಯಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ ವಿಡಿಯೋದಲ್ಲಿ ಬಾಂಗ್ಲಾದೇಶದ ಮೂವರು ಅಕ್ರಮ ವಲಸಿಗರು ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಇಲ್ಲಿ ಯಾವುದೇ ಭಯ ಹಾಗೂ ಆತಂಕವಿಲ್ಲ. ಅಕ್ರಮವಾಗಿ ಇಲ್ಲಿ ನೆಲಸಬಹುದು ಎಂದು ಹೇಳಿಕೊಂಡಿದ್ದಾರೆ ಇದು ನಿಜಕ್ಕೂ ಆತಂಕಕಾರಿ ಎಂದು ಯದುವೀರ್ ತಿಳಿಸಿದ್ದಾರೆ.

ಇದೇ ರೀತಿ ಎರಡು ವಿಡಿಯೋಗಳಿವೆ. ಎರಡೂ ವಿಡಿಯೋಗಳ ಲಿಂಕ್‌ಗಳನ್ನು ಗೃಹ ಸಚಿವರಿಗೆ ಕಳುಹಿಸಿಕೊಡಲಾಗಿದೆ. ಇನ್ನಾದರೂ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.