ಮೈಸೂರು: ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಆಂದ್ರಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,2.60 ಲಕ್ಷ ಮೌಲ್ಯದ ಚಿನ್ನ,ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಈಸ್ಟ್ ಗೋದಾವರಿ ಜಿಲ್ಲೆಯ ಪಾಲಂ ಗ್ರಾಮ ಮೂಲದ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯಿಂದ ಕುವೆಂಪುನಗರ ಠಾಣೆಯ 3 ಕನ್ನ ಕಳುವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು 2,60,000 ಮೌಲ್ಯದ 20 ಗ್ರಾಂ ಚಿನ್ನಾಭರಣ, 310 ಗ್ರಾಂ ಬೆಳ್ಳಿ ಪದಾರ್ಥ ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ವಿರುದ್ದ ಹುಬ್ಬಳ್ಳಿ, ಮಂಗಳೂರು ಪೊಲೀಸ್ ಠಾಣೆ ಹಾಗೂ ಆಂಧ್ರ ಪ್ರದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸ್ವತ್ತು ಕಳುವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

