ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಸೋಮವಾರ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ವಿಚಾರಣೆ ಇನ್ನೂ ಬಾಕಿಯಿರುವುದರಿಂದ ಅಮಾನತು ಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್ ಮಹಿಳೆಯೊಬ್ಬರನ್ನ ಅಪ್ಪಿಕೊಂಡು ಮುತ್ತಿಡುತ್ತಿದ್ದ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು ಸರಸ ನಡೆಸಿದ್ದು, ಇದು ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂದು ಹೇಳಲಾಗುತ್ತಿದೆ.
ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಕೇಸ್ನಕಲ್ಲಿ ಸಿಕ್ಕಿ ಸಂಕಟಕ್ಕೀಡಾಗಿದ್ದರೆ,ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿರುವುದು ಚರ್ಚೆಗೆ ಗ್ರಾಸ ಒದಗಿಸಿದೆ.
ಈ ಹಿಂದೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ನಟಿ ರನ್ಯಾ ರಾವ್‌ಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು,ಇದರ ನಡುವೆಯೇ ರಾಸಲೀಲೆಯ ವಿಡಿಯೋ ವೈರಲ್ ಆಗಿರುವುದು ಪೊಲೀಸ್ ಇಲಾಖೆಗೇ ಕಪ್ಪು ಚುಕ್ಕೆ ಯಾಗಿದೆ.

