ಮೈಸೂರು: ಮೈಸೂರು ನಗರದಲ್ಲಿ ಮಾದಕ ವಸ್ತುಗಳ ನಿಯಂತ್ರಣ ಸಂಬಂಧ ವಿಶೇಷ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದ್ದು, ಜನವರಿ 15 ರಿಂದ ಈವರೆಗೆ ಒಟ್ಟು 4 ಮಾದಕ ವಸ್ತು ಅಮಾನತು ಪ್ರಕರಣಗಳನ್ನು ದಾಖಲಿಸಲಾಗಿದೆ.
347 ಗ್ರಾಂ ಗಾಂಜಾ, 34 ಗ್ರಾಂ ಎಂ.ಡಿ.ಎಂ.ಎ, 12 ಗ್ರಾಂ ಹೈಡ್ರೋ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಅಮಾನತು ಪಡಿಸಿಕೊಳ್ಳಲಾಗಿದೆ.
ಅಲ್ಲದೆ 5 ಮಾದಕ ವಸ್ತು ಸೇವನೆ ಪ್ರಕರಣಗಳನ್ನು ದಾಖಲಿಸಲಾಗಿದೆ.
ಒಟ್ಟು ಒಂಬತ್ತು ಪ್ರಕರಣಗಳಲ್ಲಿ 12 ಜನ ಆರೋಪಿಗಳನ್ನು ಬಂಧಿಸಲಾಗಿದೆ.

