ಮೈಸೂರಿನಲ್ಲಿ ಅದ್ದೂರಿ ಗಣರಾಜ್ಯೋತ್ಸವ; ಧ್ವಜ ವಂದನೆ ಸ್ವೀಕರಿಸಿದ ಡಾ. ಮಹದೇವಪ್ಪ

ಮೈಸೂರು: ಮೈಸೂರಿನ ಪಂಜಿನ ಕವಾಯತು ಮೈದಾನದಲ್ಲಿ 77ನೇ ಗಣರಾಜ್ಯೋತವ ಆಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಅವರು ಧ್ವಜಾರೋಹಣ ನೆರವರಿಸಿ, ಪೆರೇಡ್ ತುಕಡಿಗಳ ಪರಿವೀಕ್ಷಣೆ ನಡೆಸಿದರು. ನಂತರ ಧ್ವಜ ವಂದನೆ ಸ್ವೀಕರಿಸಿದರು.

26 ತುಕಡಿಗಳು ಗಣರಾಜ್ಯೋತವದ ಪೆರೇಡ್ ನಲ್ಲಿ ಭಾಗವಹಿಸಿ ಪಥ ಸಂಚಲನ ನಡೆಸಿದವು. ಈ ಬಾರಿ ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಕಾರಣೀಭೂತರಾದ ಪೌರ ಕಾರ್ಮಿಕರು ಪಥ ಸಂಚಲನ ದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಸಚಿವರು 77ನೇ ಗಣರಾಜ್ಯೋತ್ಸವದ ಸಂದೇಶವನ್ನು ನೀಡಿದರು.

ಟೆರಿಶಿಯನ್ ಕಾನ್ವೆಂಟ್ ಬಾಲಕಿಯರ ಪ್ರೌಢ ಶಾಲೆ ಮಕ್ಕಳು ನಮೋ ನಮೋ ಭಾರತಾಂಬೆ ಹಾಡಿಗೆ ನೃತ್ಯ ಮಾಡಿದರು. ಮಹಾ ಬೋಧಿ ಶಾಲೆ ಮಕ್ಕಳು ಆತ್ಮ ನಿರ್ಭರ್ ಭಾರತ ನೃತ್ಯ ಪ್ರದರ್ಶನ ನೀಡಿದರು. ಡಿ ಎ ವಿ ಪಬ್ಲಿಕ್ ಶಾಲೆಯ ಮಕ್ಕಳು ವಿವಿಧತೆಯಲ್ಲಿ ಏಕತೆ ದೇಶ ಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ನೀಡಿದರು. ಕ್ಯಾಪಿಟಲ್ ಪಬ್ಲಿಕ್ ಶಾಲೆಯ ಮಕ್ಕಳು ವಂದೇ ಮಾತರಂ ದೇಶ ಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ಮಾಡಿ ಜನರನ್ನು ಆಕರ್ಶಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಸುನೀಲ್ ಬೋಸ್, ಶಾಸಕ ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಸಿ ಎನ್ ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ್, ಜಿಲ್ಲಾಧಿಕಾರಿಗಳ ಜಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಅವರು ಸೇರದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.