ಮೈಸೂರು: ಜಿಲ್ಲಾಡಳಿತ, ಮೈಸೂರು ಮಹಾ ನಗರ ಪಾಲಿಕೆ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟನೆ ಮಾಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಮರಾನಾಥ್
ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಪಾಲಿಕೆಯ ಆಯುಕ್ತ ಶೈಕ್ ಆಸಿಫ್ ತನ್ವಿರ್ ಅಧ್ಯಕ್ಷತೆ ವಹಿಸಿದ್ದರು.ಅಪರ ಜಿಲ್ಲಾಧಿಕಾರಿ ಪಿ.ಶಿವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಪಾಲಿಕೆಯ ಅಧಿಕಾರಿಗಳು,ಸಿಬ್ಬಂದಿ ಹಾಜರಿದ್ದರು.ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

