ಬೆಂಗಳೂರು: ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಉಡಾಫೆ ಉತ್ತರ ಕೊಟ್ಟಿದ್ದರು.ಈಸರ್ಕಾರ ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಟ್ವೀಟ್ ಮಾಡಿ ಪ್ರತಿವರ್ಷ ಪಕ್ಷನಾಯಕರು ತರಾಟೆಗೆ ತೆಗೆದು ಕೊಂಡಿದ್ದಾರೆ.
ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ ಎಂದು ಕಾರವಾಗಿ ಅಶೋಕ್ ಪ್ರಶ್ನಿಸಿದ್ದಾರೆ.
ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

