ನಿಯಮ ಪಾಲಿಸದಿದ್ದರೆ ದೇಶ ಬಿಟ್ಟು ತೊಲಗಿ -ಮೆಟಾಗೆ ಸುಪ್ರೀಂ ಎಚ್ಚರಿಕೆ

ನವದೆಹಲಿ: ದೇಶದ ನಿಯಮಗಳನ್ನ ಪಾಲಿಸಲು ಸಾಧ್ಯವಾಗದಿದ್ದರೆ, ದೇಶ ಬಿಟ್ಟು ತೊಲಗಿ ಎಂದು ವಾಟ್ಸಪ್‌ ಒಡೆತನದ ಮೆಟಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ ಖಡಕ್‌ ಎಚ್ಚರಿಕೆ ನೀಡಿದೆ.

ಗೌಪ್ಯತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಎಚ್ಚರಿಕೆ ನೀಡಿದೆ.

ಮೆಟಾ ಒಡೆತದ ವಾಟ್ಸಪ್‌ ಇಂದು ವಿಶ್ವದ ಜನಪ್ರಿಯ ಮೆಸೆಂಜರ್‌ ಅಪ್ಲಿಕೇಶನ್‌. ಇಂಟರ್ನೆಟ್‌ ಇದ್ದರೆ ವಿಶ್ವದ ಯಾವುದೇ ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕ ಸಾಧಿಸಬಹುದಾಗಿದೆ.

ಫೋಟೋ, ವಿಡಿಯೋ ಧ್ವನಿ ಸಂದೇಶ, ಲೈವ್‌ ಲೊಕೇಷನ್‌ಗಳನ್ನ ಹಂಚಿಕೊಳ್ಳುವ ಸಾಧನವಾಗಿದೆ.

ಆದರೆ ಮೆಟಾ ಸಂಸ್ಥೆಯು ಉದ್ದೇಶಿತ ಜಾಹೀರಾತಿಗಾಗಿ ಬಳಕೆದಾರರ ಖಾಸಗಿ ಡೇಟಾವನ್ನ ಹಂಚಿಕೊಳ್ಳುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ದೇಶ ತೊರೆಯುವಂತೆ ಸಂಸ್ಥೆಗೆ ಕಠಿಣ ಎಚ್ಚರಿಕೆ ನೀಡಿದೆ.