ವ್ಹೀಲಿಂಗ್ ಪ್ರಶ್ನಿಸಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಗುಂಪು

ಮೈಸೂರು: ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನ ಪ್ರಶ್ನಿಸಿದ್ದಕ್ಕೆ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿ, ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಹುಣಸೂರು ತಾಲೂಕು ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ.

ಮುಸ್ಲಿಮ್ ಸಮುದಾಯದ ಯುವಕರ ಗುಂಪು ದಲಿತ ಜನಾಂಗದ ಕುಟುಂಬವಿದ್ದ ಮನೆಗೆ ನುಗ್ಗಿ ಗಲಾಟೆ ಮಾಡಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ನಡೆಸಿದ ದೃಶ್ಯ ಸಿಸಿ ಕ್ಯಾಮರಾ ಹಾಗೂ ಮೊಬೈಲ್ ನಲ್ಲಿ ಸೆರೆಯಾಗಿದೆ.ಹುಣಸೂರು ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.