ಕೆ.ಆರ್. ನಗರ ಮಹಿಳೆ ಅಪಹರಣ ಕೇಸ್‌: ಹೆಚ್‌.ಡಿ.ರೇವಣ್ಣಗೆ ಶಾಕ್‌

ಬೆಂಗಳೂರು: ಕೆ.ಆರ್‌. ನಗರ ಮಹಿಳೆಯ ಅಪಹರಣ ಪ್ರಕರಣ ಸಂಬಂಧದ ಕೇಸ್ ನಲ್ಲಿ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರಿಗೆ ಹೈಕೋರ್ಟ್‌ ಶಾಕ್‌ ನೀಡಿದೆ

ಪ್ರಕರಣ ರದ್ದು ಕೋರಿದ್ದ ಹೆಚ್.ಡಿ.ರೇವಣ್ಣ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠವು ರೇವಣ್ಣ ವಿರುದ್ಧ ದೋಷಾರೋಪ ಹೊರಿಸದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶ ಹೊರಡಿಸಿದೆ.

ಹೆಚ್‌.ಡಿ.ರೇವಣ್ಣ ಪರ ವಕೀಲರು ವಾದಮಂಡನೆಗೆ ಕಾಲಾವಕಾಶ ಕೋರಿದ್ದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿದ್ದಾರೆಂಬ ಕಾರಣ ನೀಡಿ ಮನವಿ ಮಾಡಿದ್ದರು.

ಹೆಚ್.ಡಿ.ರೇವಣ್ಣ ಪರ ವಕೀಲರ‌ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತಲ್ಲದೆ, ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಸೇರಿದಂತೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿತು.