ಬೆಳ್ಳಂ ಬೆಳಗ್ಗೆ ಭೂಗಳ್ಳರಿಗೆ ಬಿಸಿ ಮುಟ್ಟಿಸಿದ ಜಿಲ್ಲಾಡಳಿತ

ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಜಿಲ್ಲಾಡಳಿತ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.

ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗವನ್ನು ಜಿಲ್ಲಾಡಳಿತ ಒತ್ತುವರಿದಾರರಿಂದ ವಶಕ್ಕೆ ಪಡೆದಿದೆ.

ಮೈಸೂರು ಊಟಿ ರಸ್ತೆ, ಶಕ್ತಿಧಾಮ ಮುಂಭಾಗ ಸುಮಾರು 38 ಗುಂಟೆ ಜಾಗವನ್ನ ಒತ್ತುವರಿ ಮಾಡಿಕೊಂಡಿದ್ದ ಖಾಸಗಿ ವ್ಯಕ್ತಿಗಳು ಪಾರ್ಕಿಂಗ್ ಹಾಗೂ ಟೀ ಅಂಗಡಿ ತೆರೆದು ವಹಿವಾಟು ನಡೆಸುತ್ತಿ ದ್ದರು.

2011 ರಲ್ಲಿ ಈ ಜಾಗವನ್ನ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗದ ಡಿ.ದೇವರಾಜ ಅರಸು ವಿಧ್ಯಾರ್ಥಿ ವಿಧ್ಯಾರ್ಥಿನಿಯರ ನಿಲಯ ನಿರ್ಮಾಣಕ್ಕೆ ಮಂಜೂರು ಮಾಡಿತ್ತು.

ಆದರೆ ಈ ಜಾಗವನ್ನ ಸುಮಾರು 25 ವರ್ಷಗಳಿಂದ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ಅನುಭವಿಸುತ್ತಿದ್ದರು.

ದಾಖಲೆಗಳನ್ನ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಒತ್ತುವರಿ ತೆರುವಿಗೆ ಆದೇಶಿಸಿದ್ದಾರೆ.ತಹಸೀಲ್ದಾರ್ ಮಹೇಶ್ ಕುಮಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ, ವಿದ್ಯಾರಣ್ಯಪುರಂ ಠಾಣೆ ನಿರೀಕ್ಷಕರಾದ ಯೋಗಾಂಜನಪ್ಪ, ಲಕ್ಷ್ಮಿಪುರಂ ಠಾಣೆ ಇನ್ಸ್ಪೆಕ್ಟರ್ ರವಿಕುಮಾರ್ ರವರ ಸಮ್ಮುಖದಲ್ಲಿ ಒತ್ತುವರಿ ತೆರುವುಗೊಳಿಸಿದ್ದಾರೆ.