ಯತೀಂದ್ರ ಹೇಳಿಕೆಗೆ ತನ್ವೀರ್ ಸೇಠ್ ಟಾಂಗ್

ಮೈಸೂರು: ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ತನ್ವೀರ್ ಸೇಠ್ ಪರೋಕ್ಷ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಈ‌ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ತನ್ವೀರ್ ಸೇಠ್, ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಈ ಹಿಂದೆಯೂ ನಾನು ಹೇಳಿದ್ದೇನೆ. ಜನ ನಮಗೆ ಅರ್ಶಿವಾದ ಮಾಡಿದ್ದಾರೆ. 136 ಶಾಸಕರು ಗೆದ್ದಿದ್ದಾರೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಮ್ಮ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಯತೀಂದ್ರ ಅವರ ಹೇಳಿಕೆಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಡಿಕೆಶಿ ಯವರ ಹೇಳಿಕೆಯನ್ನು ಸಮರ್ಥಿಸುತ್ತೇನೆ ಎಂದು ತಿಳಿಸಿದರು.

ಸಂಪುಟ ಪುನರ್ ರಚನೆ ವಿಳಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕರು, ಜನವರಿಯಲ್ಲಿ ಆಗತ್ತೆ ಅನ್ನುತ್ತಿದ್ದರು. ಯಾವ ಜನವರಿ ಅಂತ ಹೇಳಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಯತೀಂದ್ರ ಹಸ್ತಕ್ಷೇಪ ಜಾಸ್ತಿ ಎನ್ನುವ ವಿಚಾರ ಕುರಿತು ಪ್ರತಿಕ್ರಿಯಿಸಿದ ತನ್ವೀರ್ ಸೇಠ್, ಕೇವಲ ನನ್ನ ಕ್ಷೇತ್ರವಲ್ಲ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಹಸ್ತಕ್ಷೇಪ ನಡೆಯುತ್ತಿದೆ ಅಂತ ಹೇಳುತ್ತಾರೆ. ಸಮಯ ಬಂದಾಗ ಅದನ್ನು ಹೇಳುತ್ತೇನೆ. ಕೆಲವು ಅಧಿಕಾರಿಗಳು ಶಂಖದಿಂದ ಬಂದರೇ ತೀರ್ಥ ಎನ್ನುವ ರೀತಿ ವರ್ತನೆ ಮಾಡುತ್ತಿದ್ದಾರೆ. ನಾವು ಕೂಡ ಶಂಕ ಊದುವ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ವಿರುದ್ಧ ತನ್ವೀರ್ ಸೇಠ್ ಟಾಂಗ್ ನೀಡಿದರು.