ನಂಜುಂಡೇಶ್ವರ ದೇವಾಲಯದಲ್ಲೂ ಬೆಳಗ್ಗೆ ತಿಂಡಿ, ರಾತ್ರಿ ಊಟ ಪ್ರಸಾದ

ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಬೆಳಗಿನ‌ ತಿಂಡಿ‌ ರಾತ್ರಿ ಊಟ‌ ಪ್ರಸಾದ ಸಿಗಲಿದೆ.

ಈ ಮೊದಲು ಮಧ್ಯಾಹ್ನದ ವೇಳೆ ಮಾತ್ರ ಪ್ರಸಾದ(ಊಟ) ನೀಡಲಾಗುತ್ತಿತ್ತು.ಇನ್ನು ಮುಂದೆ ದೇವಸ್ಥಾನದ ದಾಸೋಹ ಭವನದಲ್ಲಿ ಬೆಳಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.

ಮಹದೇಶ್ವರ ಬೆಟ್ಟದ ಮಾದರಿಯಲ್ಲಿ ನಂಜುಂಡೇಶ್ವರನ ದೇವಸ್ಥಾನದಲ್ಲೂ ಊಟದ ವ್ಯವಸ್ಥೆ ಮಾಡಲಾಗಿದ್ದು, ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಭಾನುವಾರ ಈ ಪ್ರಸಾದ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದರು.

ರಾಜ್ಯ ಸರ್ಕಾರದ ಉಚಿತ ಬಸ್ ವ್ಯವಸ್ಥೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಭಕ್ತರ ಅನುಕೂಲಕ್ಕಾಗಿ ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಪ್ರಸಾದ ವಿತರಣೆ ಮಾಡಲಾಗುತ್ತದೆ.ಈ ಮೂಲಕ ವರ್ಷದ ಎಲ್ಲಾ ದಿನಗಳಲ್ಲೂ ಭಕ್ತರಿಗೆ ನಂಜುಂಡೇಶ್ವರನ ಪ್ರಸಾದ ಸಿಗಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಹಾಗೂ ಶಾಸಕರು ತಿಳಿಸಿದ್ದಾರೆ.