ನಾಳೆ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂ ಡಿದ್ದು,ಇದೇ ಗುರುವಾರ ಸಂಜೆ ಯಿಂದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಬಹುದು.

ಗುರುವಾರ ಬೆಂಗಳೂರು ಚಲೋ ಕೈಗೊಳ್ಳಲಿದ್ದು, ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುವುದಾಗಿ ಕೆಲ ನೌಕರರು ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆಂದು ಹೇಳಲಾಗುತ್ತಿದೆ.

ನಾಳೆ ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಗಡುವು ನೀಡಲಾಗಿದೆ,ಬೇಡಿಕೆ ಈಡೇರಿಕೆಗೆ ನಿರ್ಣಯ ಕೈಗೊಳ್ಳದಿದ್ದರೆ ಸಾರಿಗೆ ಬಂದ್ ಮಾಡುವುದಾಗಿ ಹೆಸರು ಹೇಳಲು ಇಚ್ಚಿಸದ‌ ನೌಕರರು‌ ತಿಳಿಸಿದ್ದಾರೆ.

ಹಾಗಗಿ‌ ಸಂಜೆ ನಂತರ ‌ವಿಷಯ ತಿಳಿದುಕೊಂಡು ಬಸ್ ಪ್ರಯಾಣ ಮಾಡುವುದು ಒಳಿತು ಎಂಬುದು ನಮ್ಮ ಸಲಹೆ.

ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಕೆಲಸಕ್ಕೆ ಹಾಜರಾಗದಿದ್ದರೆ ವೇತನ ಇರುವುದಿಲ್ಲ, ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಲಾಗಿದೆ.

ಪ್ರತಿಭಟನೆಯಲ್ಲಿ ಭಾಗಿಯದರೆ ಸೇವಾ ನಿಯಮದ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲ ಲಾಗುವುದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್ ಪಾಷಾ ಎಚ್ಚರಿಕೆ ಕೊಟ್ಟಿದ್ದಾರೆ.ಹಾಗಾಗಿ ನಾಳೆ ಏನಾಗುವುದೊ ಕಾದು ನೋಡಬೇಕಿದೆ.