ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

ಮೈಸೂರು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ಸರಸ್ವತಿಪುರಂನಲ್ಲಿ ಈ ಘಟನೆ ನಡೆದಿದ್ದು, ಸಂಧ್ಯಾ(46) ಆತ್ಮಹತ್ಯೆ ಮಾಡಿಕೊಂಡ‌ ಗೃಹಿಣಿ

ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನೀಡದ ಕಾರಣ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರವಾಸದ ವಿಚಾರದಲ್ಲಿ ಸಂಧ್ಯಾ ಮತ್ತು ಅವರ ಪತಿ ನಡುವೆ ಜಗಳವಾಗಿದೆ.ನಂತರ ಪತಿ ಹೊರಗೆ ಹೋದಾಗ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆದರೆ‌ ಸಂಧ್ಯಾ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿದ್ದಾರೆ.