ಲಾರಿ-ಬೈಕ್ ಡಿಕ್ಕಿ:ಇಬ್ಬರು‌ ಸವಾರರ ದುರ್ಮರಣ

ಮೈಸೂರು: ಲಾರಿ, ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ಅರಸು ಕಲ್ಲಹಳ್ಳಿ ಬಳಿ ನಡೆದಿದೆ.

ಅರಸು ಕಲ್ಲಹಳ್ಳಿ‌ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಶೋಕ್ ಲೇಲ್ಯಾಂಡ್ ಲಾರಿ ಮತ್ತು ಟಿವಿಎಸ್‌ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಸುರೇಶ (63), ಮಾದೇವ (52) ಮೃತಪಟ್ಟ ದುರ್ದೈವಿಗಳು.

ಅಪಘಾತವಾದ ಕೂಡಲೇ ಬೈಕ್‌ಗೆ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟುಹೋಗಿದೆ.

ಸ್ಥಳಕ್ಕೆ ಡಿವೈಎಸ್ಪಿ ರವಿ, ಹುಣಸೂರು ಗ್ರಾಮಾಂತರ ಠಾಣೆ ಪಿಎಸ್ಐ ರಾಧಾ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.