ಮೈಸೂರು: ನವದೆಹಲಿಯಲ್ಲಿ ಅಂತರಾಷ್ಟ್ರೀಯ ಎಐ ಸಮ್ಮೇಳನ ನಡೆಯುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನಕೆಲವರು ಗೂಂಡಾಗಿರಿ ಮಾಡಿದರೆಂದು ಆರೋಪಿಸಿ ಮೈಸೂರಿನಲ್ಲಿ
ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷರಾದ ಅರ್ಜುನ್ ಪಾರ್ಥ ಹಾಗೂ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಈ ವೇಳೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅರ್ಜುನ್ ಪಾರ್ಥ ಮಾತನಾಡಿ,ದೆಹಲಿಯಲ್ಲಿ ಎಐ ಅಂತರಾಷ್ಟ್ರೀಯ ಸಮ್ಮೇಳನ ನಡೆಯುತ್ತಿತ್ತು.ಸುಮಾರು 22 ದೇಶಗಳು ಪಾಲ್ಗೊಂಡಿದ್ದವು ಭಾರತ ದೇಶ ಎಐ ಮುನ್ನಡೆಸುವ ಹಂತದಲ್ಲುತ್ತು ಅದೇ ಸಮಯದಲ್ಲಿ ಕಾಂಗ್ರೆಸ್ ಕೆಲವರು ದರ್ವರ್ತನೆ ತೋರಿದ್ದಾರೆ ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದರು.
ಪ್ರತಿಭಟನಾಕಾರರನ್ನು ಪೊಲೀಸ್ ಬಂಧಿಸಿ ಕರೆದೊಯ್ದರು.

