ಮೈಸೂರು: ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಕುರ್ಚಿ ಕಾದಾಟ ಕಾಂಗ್ರೆಸ್ ಆಂತರಿಕ ವಿಚಾರ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ, ಮಾಧ್ಯಮದವರು ಏನು ಹೇಳುತ್ತಾರೆ ಅಷ್ಟು ಮಾತ್ರ ಗೊತ್ತು. ಆದರೆ, ಕಾದಾಟದಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ಹೇಳಿದರು.
ತಿ.ನರಸೀಪುರದಲ್ಲಿ ಕೆಎಸ್‌ಐಸಿ ಭೂಮಿಯನ್ನು ಕ್ರೀಡಾಂಗಣಕ್ಕೆ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ರಾಜ್ಯ ಸರ್ಕಾರ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ಕೆಎಸ್‌ಐಸಿ ಜಾಗವನ್ನು ಅದರ ಅಭಿವೃದ್ಧಿಗೆ ಬಳಸಬೇಕು ಎಂದು ಒತ್ತಾಯಿಸಿದ ಯದುವೀರ್ ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

