ಬಿಜೆಪಿಗರ ವಿರುದ್ಧ ಸಿಎಂ ಗರಂ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋದಕ್ಕೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗರ‌ ವಿರುದ್ದ ಟೀಕಾಪ್ರಹಾರ ನಡೆಸಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ‌ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದರು.

ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ ವಿಚಾರಕ್ಕೆ ಪ್ರತಿಕ್ರಿಯುಸಿದ ಸಿಎಂ ವಿರೋಧ ಪಕ್ಷ ಇರೋದೇ ಪ್ರತಿಭಟನೆ ಮಾಡೋದಕ್ಕೆ ಅದೊಂದು ಚಾಳಿ, ನಾವು ಯಾರನ್ನು ಓಲೈಕೆ ಮಾಡುವುದಿಲ್ಲ ಎಂದು ಹೇಳಿದರು.

ನಿನ್ನೆ ಧಾರವಾಡದಲ್ಲಿ ಏನಾಗಿದೆ ಗೊತ್ತಿದೆಯಾ ಎಂದು ವರದಿಗಾರರನ್ನೇ ಪ್ರಶ್ನಿಸಿದ ಸಿದ್ದರಾಮಯ್ಯ, ವಿದ್ಯಾರ್ಥಿಗಳು ಯಾಕೆ ವಿಪಕ್ಷ ಬಿಟ್ಟು ಪ್ರತಿಭಟನೆ ಮಾಡಿದ್ರು ನರೇಂದ್ರ ಮೋದಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು,10 ವರ್ಷಕ್ಕೆ ಎಷ್ಟು ಉದ್ಯೋಗ ಸೃಷ್ಟಿ ಮಾಡಿದ್ರು ಎಂದು ಮಾರ್ಮಿಕವಾಗಿ ನುಡಿದರು.

ಒಳ ಮೀಸಲಾತಿ ಸಮಸ್ಯೆಯಿಂದ ಸ್ವಲ್ಪ ವಿಳಂಬ ಆಗಿದೆ,ನಮ್ಮ ಸರ್ಕಾರ ಉದ್ಯೋಗ ಕೊಟ್ಟೆ ಕೊಡುತ್ತದೆ ಎಂದು ಸ್ಪಷ್ಟಪಡಿಸಿದರು.