ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ

ಬೆಂಗಳೂರು: ಬಾಗೇಪಲ್ಲಿಯ ಸುಬ್ಬಾರೆಡ್ಡಿ ಯವರ ಕಾಂಗ್ರೆಸ್‌ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸೃವೋಚ್ಛ‌ ನ್ಯಾಯಾಲಯ ತಡೆ ನೀಡಿದೆ.

ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಕಾರಣ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ಹೈಕೋರ್ಟ್‌ ಅಸಿಂಧು ಗೊಳಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠವು ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆ ನೀಡಿ, ಸೆಪ್ಟೆಂಬರ್ 7ಕ್ಕೆ ವಿಚಾರಣೆ ಮುಂದೂಡಿತು.

ಇದೇ ವೇಳೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಯಿತು.

ಸಧ್ಯಕ್ಕೆ ಎಸ್‌.ಎನ್‌ ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ ಶಾಸಕರಾಗಿ ಮುಂದುವರಿಯಲಿದ್ದಾರೆ,ಆದರೆ ಸುಪ್ರೀಂ ಕೋರ್ಟ್ ತೀರ್ಪು ಏನು ಬರಲಿದೆಯೊ ಶಾಸಕರಾಗಿ ಮುಂದುವರಿಯುತ್ತಾರಾ ಇಲ್ಲವೊ ಎಂಬುದನ್ನು ಕಾದು ನೋಡಬೇಕು.