ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಟುವಾಗಿ ಟೀಕಿಸಿದ್ದಾರೆ.
ಕೊಡಗಿನ ನಾಪೋಕ್ಲುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆ ವೇಳೆ ಅಹಿತಕರ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದರು.
ಈ ಭಾಗದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯ ಕರ್ತರಿಗೆ ಬದುಕಲು ಕಷ್ಟ ಆಗುತ್ತಿದೆ ಎಂಬುದು ಗಂಭೀ ರವಾದ ವಿಚಾರ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನು ವ್ಯವಸ್ಥೆ ಕಾಪಾಡಬೇಕು ಎಂದು ಒತ್ತಾಯಿಸಿದರು.

