ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದ ರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.
ಶನಿವಾರ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಸಿಎಂ ಮಾತನಾಡಿದರು.
ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆ ಇರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು ಎಂದು ತಿಳಿಸಿದರು.
ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವು ದಿಲ್ಲ, ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.

