ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ-ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆದಿದ್ದಾರೆ, ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಿಎಂ ಸಿದ್ದರಾಮಯ್ಯ‌‌ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ‌ ಸಿಎಂ,ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು, ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ ಎಂದು ತಿಳಿಸಿದರು.ಅವರು ಅಭ್ಯರ್ಥಿಯಾಗ ಬೇಕೆಂದು ಬಯಸುವುದು ತಪ್ಪೇನಿಲ್ಲ ಎಂದು ಹೇಳಿದರು.

ನಿನ್ನೆ 11 ಜನ ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ನಾಮಪತ್ರ ಹಿಂಪಡೆದಿದ್ದರಿಂದ ಅವರಿಗೆ ಧನ್ಯವಾದ ಹೇಳಿದ್ದೇನೆ ಎಂದು ತಿಳಿಸಿದರು.

ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು,ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ, ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.