ಬಿಜೆಪಿಗೆ ಸೇರ್ಪಡೆಗೊಂಡ ಟೆನಿಸ್ ದಂತಕಥೆ ಪೇಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆ ಹೊತ್ತಲ್ಲೇ ದೊಡ್ಡ ಬೆಳವಣಿಗೆಯಾಗಿದೆ.
ಭಾರತೀಯ ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ ಗೊಂಡರು.

ಇತ್ತೀಚೆಗೆ, ಕೋಲ್ಕತ್ತಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್ ನಬಿನ್ ಅವರನ್ನು ಪೇಸ್ ಭೇಟಿಯಾಗಿದ್ದರು.

ಪೇಸ್ ಗೆ ರಾಜಕೀಯ ಹೊಸದೇನಲ್ಲ. 2021 ರಲ್ಲಿ ತೃಣಮೂಲ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರು. 2022 ರಲ್ಲಿ ಗೋವಾ ವಿಧಾನಸಭಾ ಚುನಾವಣೆ ಸಮಯದಲ್ಲಿ ಅವರು ಟಿಎಂಸಿ ಪರವಾಗಿ ಸಕ್ರಿಯವಾಗಿ ಪ್ರಚಾರ ಮಾಡಿದ್ದರು. ಆದರೂ, ಅವರು ಸ್ವತಃ ಸ್ಪರ್ಧಿಸಿರಲಿಲ್ಲ.

ಈ ವೇಳೆ ಕೇಂದ್ರ ಸಚಿವ ಕಿರಣ್ ರಿಜಿಜು ಮಾತನಾಡಿ, ಬಿಜೆಪಿ ಕುಟುಂಬಕ್ಕೆ ಲಿಯಾಂಡರ್ ಪೇಸ್ ಅವರ ಪ್ರವೇಶ ಐತಿಹಾಸಿಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಿಂದ ಕ್ರೀಡೆ ಮತ್ತು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಪ್ರತಿಪಾದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಪೇಸ್ ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.