ಬಾಗಲಕೋಟೆ: ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಬಿಜೆಪಿಯ ಯತ್ನಾಳ್ ಮತ್ತು ವಿಶ್ವನಾಥ್ ಅವರೇ ಬಹಿರಂಗವಾಗಿ ಹೇಳಿದ್ದಾರಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದರು.
ಬಾಗಲಕೋಟೆಯ ಹೆಲಿಪ್ಯಾಡ್ ನಲ್ಲಿ
ಮಾಧ್ಯಮದವರೊಂಗಿದೆ ಈ ಕುರಿತು ಪ್ರತಿಕ್ರಿಯಿಸಿದ ಅವರು,
ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ ಎಂಬುದನ್ನು ಉಲ್ಲೇಖಿಸಿ ಯಡಿಯೂರಪ್ಪ ಅವರು ಆರೋಪ ಮಾಡಬೇಕು,ಅರಳು ಮರಳು ಯಡಿಯೂರಪ್ಪ ಅವರು ಆಧಾರ ಸಹಿತವಾಗಿ ಮಾತನಾಡಬೇಕು ಎಂದು ತಿರುಗೇಟು ನೀಡಿದರು.
ತಮ್ಮ ಜಾತಿಯ ಅಭ್ಯರ್ಥಿ ಆದ ಕಾರಣ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಠಿಕಾಣಿ ಹೂಡಿದ್ದಾರೆ ಎಂಬ ಯಡಿಯೂರಪ್ಪ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ದಾವಣಗೆರೆ ದಕ್ಷಿಣದಲ್ಲಿ ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಅಲ್ಲೇ ಠಿಕಾಣಿ ಹೂಡಿ ಪ್ರಚಾರ ಮಾಡಿದ್ದೇನೆ ಅವರು ಯಾವ ಜಾತಿ ಎಂದು ಸಿಎಂ ಮರು ಪ್ರಶ್ನಿಸಿದರು.
ನಾವು ಜಾತಿ ಕಾರಣಕ್ಕೆ ಪ್ರಚಾರ ಮಾಡುವುದಿಲ್ಲ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಯಾರಾಗಿರಬೇಕು ಎಂಬುದರ ಬಗ್ಗೆ ಹೈ ಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಪ್ರಶ್ನೆಯೊದಕ್ಕೆ ಮುಖ್ಯ ಮಂತ್ರಿಗಳು ಉತ್ತರಿಸಿದರು.
ಅಸಂಸದೀಯ ಪದ ಬಳಸಿರುವುದು ಪ್ರತಾಪ್ ಸಿಂಹ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

