ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

ವಾಷಿಂಗ್ಟನ್‌: ಕಳೆದ‌ 36 ದಿನಗಳಿಂದ ಸತತವಾಗಿ ನಡೆದಿದ್ದ ಮಧ್ಯ ಪ್ರಚ್ಯ ಯುದ್ದದಲ್ಲಿ ಈಗ ಜನರಿಗೆ ಸ್ವಲ್ಪ ನೆಮ್ಮದಿ ಸಿಕ್ಕಿದೆ,ಇದಕ್ಕೆ ಅಮೆರಿಕ ಮತ್ತು ಇರಾನ್‌ ನಡುವೆ 2 ವಾರಗಳ ಕದನ ವಿರಾಮ ಘೋಷಣೆಯಾಗಿರುವುದು ಕಾರಣ.

ಇರಾನ್‌ಗೆ ನೀಡಿದ್ದ 48 ಗಂಟೆಗಳ ಡೆಡ್‌ಲೈನ್‌ ಅಮೆರಿಕ ಕಾಲಮಾನ ರಾತ್ರಿ 8 ಗಂಟೆಗೆ ಅಂತ್ಯವಾಗುವ ಒಂದು ಗಂಟೆ ಮೊದಲು ಅಮೆರಿಕ ಅಧ್ಯಕ್ಷ ಟ್ರಂಪ್‌ ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಕದನ ವಿರಾಮ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಇರಾನ್‌ ಒಪ್ಪಿಕೊಂಡಿದೆ ಮತ್ತು ಅವರ ಕಡೆಯಿಂದ 10 ಅಂಶಗಳ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ ಎಂದು ಕೂಡಾ ಟ್ರಂಪ್ ತಿಳಿಸಿದ್ದಾರೆ.