ಬೆಂಗಳೂರು: ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಂತಾಗಿದೆ.
ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಅವರನ್ನು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಅವರಿಗೆ ನ್ಯಾಯಾಲ ಏ.15 ರಂದು ದೋಷಿ ಎಂದು ಘೋಷಣೆ ಮಾಡಿತ್ತು.
ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ನ್ಯಾಯಾಲಯ ಘೋಷಣೆ ಮಾಡಿದೆ.
19ನೇ ಆರೋಪಿ ಚನ್ನಕೇಶವ ಟಿಂಗರಿಕರ್ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ ಹಾಗೂ ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಎಂದು ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣ ರಾಜ್ಯ ಹಾಗೂ ದೇಶದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಈ ಪ್ರಕರಣದಲ್ಲಿ 21 ಆರೋಪಿಗಳು. ಇವರ ಪೈಕಿ ಇಬ್ಬರು ಮಾಫಿಸಾಕ್ಷಿಗಳು, ಈ ಹಿನ್ನೆಲೆಯಲ್ಲಿ ನ್ಯಾಯಾಲಯ 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ.
ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹಾಗಾಗಿ ಅವರನ್ನು ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ.
ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ.
ಉಳಿದಂತೆ ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್ ಅವರನ್ನು ದೋಷಿಗಳು ಎಂದು ಹೇಳಿ ನ್ಯಾಯಾಲಯ ಶಿಕ್ಷೆ ನೀಡಿದೆ.

