ಮಹಿಳಾ ಮೀಸಲಾತಿಗೆ ವಿರೋಧವಿಲ್ಲ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,
2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ, ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದೆ ಎಂದು ದೂರಿದರು.

ಮಾಜಿ ಸಚಿವ ಕೆ. ಎನ್.ರಾಜಣ್ಣ ಅವರು ಮುಖ್ಯಮಂತ್ರಿಗಳ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ರಾಜಣ್ಣ ಅವರೊಂದಿಗೆ ಮಾತನಾಡಲಾಗಿದೆ ಎಂದು ಸಿದ್ದರಾಮಯ್ಯ ಉತ್ತರಿಸಿದರು.