ರಾಣೇಬೆನ್ನೂರು: ಕ್ಷೇತ್ರ ಮರು ವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,
ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ,ನಾವು ಮೀಸಲಾತಿ ಪರವಾಗಿದ್ದೇವೆ ಎಂದು
ಸ್ಪಷ್ಟಪಡಿಸಿದರು.
ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು, ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಸಿಎಂ ತಿಳಿಸಿದರು.
ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ,ಹಾಗಾಗಿ ಸೋಲಾಗಿದೆ,ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ತಮಿಳುನಾಡು , ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ರಾಜಕೀಯ ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.
ಜನಪ್ರತಿನಿಧಿಗಳು ಜೈಲು ಸೇರುತ್ತಿರುವುದರ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ಸಿದ್ದರಾಮಯ್ಯ ಉತ್ತರಿಸಿದರು.

