ಮೈಸೂರು: ಹೆಚ್ಚು ಅಂಕ ಬಂದಿಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹೇಯ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ನಗರದ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾಳೆ,ಆದರೂ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು ಮತ್ತು ಸವಿತಾ ದಂಪತಿಗಳ ಪುತ್ರಿ ತ್ರಿಶಾಲ (16)ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಎಸ್ ಎಸ್ ಎಲ್ ಸಿ ಫಲಿತಾಂಶ ಬಂದ ಬಳಿಕ 440 ಅಂಕಗಳನ್ನು ಗಳಿಸಿ ತ್ರಿಶಾಲ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾಳೆ.
ಆದರೆ ತ್ರಿಶಾಲ ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ. ಪ್ರಥಮ ದರ್ಜೆಯಲ್ಲಿ ತೆರ್ಗಡೆಯಾಗಿರುವುದು ಕಡಿಮೆ ಅಂಕ ಎಂದು ಮನನೊಂದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬುಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾಳೆ.
ಬಾಲಕಿಯ ಸಾವಿನಿಂದ ಕುಟುಂಬಸ್ಥರ ಕಣ್ಣೀರ ಕಟ್ಟೆ ಒಡೆದಿದೆ.ಬಾಲಕಿ ಈ ತಪ್ಪು ನಿರ್ಧಾರ ಮಾಡಬಾರ ದಿತ್ತು.

