ಗಾಂಜಾ ಮಾರುತ್ತಿದ್ದ ಮೂವರು ಅಂತರ್ ರಾಜ್ಯ ಆರೋಪಿಗಳು ಅಂದರ್

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅಂತರರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಒಡಿಶಾ ಮೂಲದ ರಾಜ ಕಪೂರ್, ಬಸಂತ್ ಕುಮಾ‌ರ್ ಹಾಗೂ ಶಮರ್‌ ಮಿತ್ರ ಬಂಧಿತ ಆರೋಪಿಗಳು‌

ಈ ಆರೋಪಿಗಳು ಬಿಳಿಕೆರೆಯ ಕೆರೆ ಹತ್ತಿರ ಗಾಂಜಾ ಪ್ಯಾಕೆಟ್ ಗಳನ್ನು ಸಿದ್ಧಪಡಿಸಿಕೊಂಡು ಮಾರಾಟ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಡಿವೈಎಸ್‌ಪಿ ರವಿ ಅವರ ಮಾರ್ಗದರ್ಶನದಲ್ಲಿ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಅವರ ಬಳಿಯಿದ್ದ 3 ಕೆಜಿ 170 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಬಿಳಿಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.