ಮೈಸೂರು: ಸರಳ, ಸಜ್ಜನ, ನಿಷ್ಠಾವಂತ, ಪ್ರಾಮಾಣಿಕ ಕಲಾವಿದ ಹಾಗೂ ಎಲ್ಲ ಸಮುದಾಯದ ಜನರ ಪ್ರೀತಿಗೆ ಪಾತ್ರರಾದ ಡಾ.ರಾಜಕುಮಾರ್ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ ಎಂದು
ಶಾಸಕರಾದ ಟಿ ಎಸ್ ಶ್ರೀವತ್ಸ ಹೇಳಿದರು.
ಅರಮನೆ ಮುಂಭಾಗದಲ್ಲಿರುವ ಡಾಕ್ಟರ್ ರಾಜ್ ಕುಮಾರ್ ಉದ್ಯಾನವನದಲ್ಲಿ ಡಾಕ್ಟರ್ ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ವರನಟ ಡಾ. ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ನಂತರ ಸ್ವಯಂ ಪ್ರೇರಿತ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಪ್ರಮಾಣ ಪತ್ರ ನೀಡಿ ಶಾಸಕರು ಮಾತನಾಡಿದರು.
ತಮ್ಮ ನಟನೆಯ ಮೂಲಕ ಮನೆ ಮಾತಾಗಿ, ಕೋಟ್ಯಂತರ ಅಭಿಮಾನಿ ದೇವರ ಹೃದಯದಲ್ಲಿ ಡಾ.ರಾಜಕುಮಾರ್ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ. ಡಾ.ರಾಜಕುಮಾರ್ ವೃತ್ತಿ ಬದುಕು ನಮಗೆಲ್ಲರಿಗೂ ಮಾದರಿಯಾಗುವಂತಹದ್ದು. ಅವರ ಜೀವನದ ಆದರ್ಶಗಳನ್ನು ತಿಳಿದು ನಮ್ಮ ಜೀವನದಲ್ಲೂ ಅನುಕರಣೆ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮ ದಲ್ಲಿ ಮೂಡ ಮಾಜಿ ಸದಸ್ಯರಾದ ಲಕ್ಷ್ಮೀದೇವಿ, ಬಿಜೆಪಿ ಮುಖಂಡರಾದ ಜೋಗಿ ಮಂಜು, ಕೆಎಂಪಿ ಕೆ ಚಾರಿಟೇಬಲ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಹಿತ್, ಪ್ರಭು,ಕೀರ್ತಿ, ಕಿಶೋರ್ ಮತ್ತಿತರರು ಪಾಲ್ಗೊಂಡಿದ್ದರು.

