ನವದೆಹಲಿ: ಈಗಾಗಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿ ಆಟೋ,ಊಬರ್ ಹೊಟೇಲ್ ಮತ್ತಿತರರು ಹೈರಾಣಾಗಿದ್ದು,ಮತ್ತೆ ಬೆಲೆ ಏರಿಸಿ ಗಾಯದ ಮೇಲೆ ಬರೆ ಎಳೆಯಲಾಗಿದೆ.
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1 ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಭಾರಿ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 3,071.50 ರೂಪಾಯಿ ತಲುಪಿದಂತಾಗಿದೆ.
ಇದಕ್ಕೂ ಮೊದಲು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿ ಇತ್ತು. ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ 3,152 ರೂ. ಆಗಲಿದೆ.
ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಗೃಹ ಬಳಕೆಯ (14.2 ಕೆಜಿ) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ,ಹಾಗಾಗಿ ಗೃಹಿಣಿಯರು ನಿಟ್ಟುಸಿರು ಬಿಟ್ಟಿದ್ದಾರೆ.
ಜಾಗತಿಕ ಇಂಧನ ಬೆಲೆಗಳ ಏರಿಕೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಮಾಡಲಾಗಿದೆ.
ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟುಮಾಡಲಿದ್ದು ಆಹಾರ ಪದಾರ್ಥಗಳ ಬೆಲೆ ಹಾಗೂ ಹೊಟೇಲ್ ಊಟ,ತಿಂಡಿ ಬೆಲೆ ಗಗನಕ್ಕೆ ಏರಲಿದೆ.

