ಎಸ್ ಎಸ್ ಎಲ್ ಸಿ ಯಲ್ಲಿ ಶೇ.90 ರಷ್ಟು ಅಂಕ ಪಡೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದಿದ್ದರೂ ಅದೇನಾಯಿತೊ ಏನು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನೆಲಮಂಗಲ ಸಮೀಪದ ಬೀರೇಗೌಡನಹಳ್ಳಿ ನಿವಾಸಿ ಸಂಧ್ಯಾ(16) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ.

ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 90ರಷ್ಟು ಅಂಕ ಪಡೆದಿದ್ದ ಸಂಧ್ಯ ಎಲ್ ಎಲ್‌ ಬಿ ಓದಬೇಕು, ಮೆಡಿಕಲ್ ಸೇರಬೇಕು ಎಂಬ ಆಸೆ ಹೊತ್ತಿದ್ದಳು. ಅದೇನಾಯ್ತೊ ಏನೊ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಠಡಿಯಲ್ಲಿ ಫ್ಯಾನ್ ಗೆ ನೇಣಿ ಹಾಕಿಕೊಂಡು ಆತ್ಮಹತ್ಯೆ ಕೊಂಡಿದ್ದಾಳೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು ಈ ವೇಳೆ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಸಾರಿ ಅಪ್ಪ ಎಂದು ಸಾಯುವ ಮುನ್ನ ಸಂದ್ಯಾ ಬರೆದಿದ್ದಾಳೆ.

ನೆಲಮಂಗಲ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಮೃತದೇಹವನ್ನು ಮಾದನಾಯಕನಹಳ್ಳಿ ಪೊಲೀಸರು ಸಾಗಿಸಿದ್ದು,ಮುಂದಿನ ಕ್ರಮ ಕೈಗೊಂಡಿದ್ದಾರೆ.