ಗೃಹಿಣಿ ಅನುಮಾನಾಸ್ಪದ ಸಾವು: ಪತಿ ಅರೆಸ್ಟ್

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಗೃಹಿಣಿಯ ಪೋಷಕರು ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರಾಮದ ಬ್ಯಾಟೇಗೌಡನ ಪತ್ನಿ ನಾಗವೇಣಿ (೨೪) ಮೃತ ಗೃಹಿಣಿ.

ಗಂಡ ಬ್ಯಾಟೇಗೌಡ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ, ಹತ್ಯೆಗೈದು ನೀರಿನ ಕೊಳದಲ್ಲಿ ಹಾಕಿದ್ದಾನೆ ಎಂದು ಪೋಷಕರು ಶಿವಳ್ಳಿ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.

ಕೊಳದಿಂದ ನಾಗವೇಣಿ ಅವರ ದೇಹವನ್ನು ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಮಿಮ್ಸ್ ಆಸ್ಪತ್ರೆಗೆ ರವಾನಿಸಿ, ಪಂಚನಾಮೆ ಬಳಿಕ ಮೃತಳ ವಾರಸುದಾರಿಗೆ ಮೃತ ದೇಹವನ್ನು ಹಸ್ತಾಂತರಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಶಿವಳ್ಳಿ ಠಾಣಾ ಪೊಲೀಸರು ಪತಿ ಬ್ಯಾಟೇಗೌಡನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.