ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ವಿಜಯೋತ್ಸವ ಬ್ಯಾನ್ ಮಾಡಲಾಗಿದೆ !
ಏಕೆಂದರೆ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ ನಡೆಸಿದರೆ ಏನಾದರೂ ಅನಾಹುತಗಳು ಸಂಭವಿಸಬಹುದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯೋತ್ಸವ ಬ್ಯಾನ್ ಮಾಡಲಾಗಿದೆ.
ಚುನಾವಣಾ ಆಯೋಗ ವಿಜಯೋತ್ಸವ,ರ‍್ಯಾಲಿಯನ್ನು ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಲ್ಲಿಯೂ ಯಾವುದೇ ವಿಜಯೋತ್ಸವ ಆಚರಣೆಳಿಗೆ ಅವಕಾಶ ನೀಡಲಾಗುವುದಿಲ್ಲ. ಸೂಕ್ಷ್ಮ ಎಣಿಕೆ ಪ್ರಕ್ರಿಯೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

