ಮುಂಬೈ: ಟಿಸಿಎಸ್ ಕಾರ್ಪೊರೇಟ್ ಜಿಹಾದ್ ಪ್ರಕರಣದ ಮಾಸ್ಟರ್‌ಮೈಂಡ್ ನಿದಾ ಖಾನ್‌ಳನ್ನು ವಿಶೇಷ ತನಿಖಾ ತಂಡ ಬಂಧಿಸಿದೆ.
ಟಿಸಿಎಸ್‌ನಲ್ಲಿ ನಡೆದ ಮತಾಂತರ ಆರೋಪದ ಕುರಿತು ನಿದಾ ಖಾನ್ ವಿರುದ್ಧ ಹಲವಾರು ದೂರುಗಳು ದಾಖಲಾದ ನಂತರ ಆಕೆ ನಾಪತ್ತೆಯಾಗಿದ್ದಳು.
ಸುಮಾರು 25 ದಿನಗಳ ಕಾಲ ಆಕೆ ತಲೆಮರೆಸಿಕೊಂಡಿದ್ದಳು. ಅಲ್ಲದೇ ಎಫ್‌ಐಆರ್ ದಾಖಲಾದ ನಂತರ ಬಂಧನದಿಂದ ಬಚಾವ್ ಆಗಲು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು. ಆದರೆ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು.
ನಿದಾ ಕಳೆದ ನಾಲ್ಕು ದಿನಗಳಿಂದ ಛತ್ರಪತಿ ಸಂಭಾಜಿನಗರದ ನರೇಗಾಂವ್ ಪ್ರದೇಶದ ಕೈಸರ್ ಕಾಲೋನಿಯಲ್ಲಿರುವ ಫ್ಲಾಟ್‌ನಲ್ಲಿ ಪೋಷಕರ ಜೊತೆ ವಾಸಿಸುತ್ತಿದ್ದಳು. ಈಕೆಯನ್ನು ಬಂಧಿಸುವ ಎರಡು ದಿನಗಳ ಮೊದಲು ಫ್ಲ್ಯಾಟ್ ಮೇಲೆ ತೀವ್ರ ನಿಗಾ ಇರಿಸಲಾಗಿತ್ತು ಆನಂತರ ಅಲ್ಲೇ ಆಕೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯನ್ನು ಛತ್ರಪತಿ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ನಂತರ ಟ್ರಾನ್ಸಿಟ್ ರಿಮಾಂಡ್ ಮೂಲಕ ವಶಕ್ಕೆ ಪಡೆದು, ನಾಸಿಕ್‌ಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

